ಬದಿಯಡ್ಕ: ಯಕ್ಷಮಿತ್ರರು ಬೆಂಗಳೂರು (ರಿ.) ಟ್ರಸ್ಟ್ ವತಿಯಿಂದ ಶಿಕ್ಷಕ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 5 ರಂದು ವಿಶೇಷ ಯಕ್ಷಗಾನ ತಾಳಮದ್ದಳೆ ಹಾಗೂ ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 6ನೇ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಯಲ್ಲಿ ಈ ವಿಶೇಷ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಹಿರಿಯ ಕಲಾವಿದ, ಉಪನ್ಯಾಸಕ ಹಾಗೂ ಅಂಕಣಕಾರ ರಾಧಾಕೃಷ್ಣ ಕಲ್ಚಾರ್ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು.
ಮುಖ್ಯ ಅತಿಥಿಯಾಗಿ ಶ್ರೀ ಪ್ರಮೋದ್ ಮಧ್ವರಾಜ್ ಭಾಗವಹಿಸುವರು.
ಸೆಪ್ಟೆಂಬರ್ 5 ರಂದು ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಯಕ್ಷಗಾನ ತಾಳಮದ್ದಳೆಯೊಂದಿಗೆ ಶಿಕ್ಷಕರ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ. ಶಿಕ್ಷಣ, ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯಕ್ಷಗಾನಾಭಿಮಾನಿಗಳು, ಶಿಕ್ಷಕರು, ಕಲಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯಕ್ಷಮಿತ್ರರು ಬೆಂಗಳೂರು (ರಿ.) ಟ್ರಸ್ಟ್‍ನ ಕಾರ್ಯದರ್ಶಿ ಶ್ಯಾಮ ಸೂರ್ಯ ಎಂ. ತಿಳಿಸಿದ್ದಾರೆ.

-%20Radhakrishna%20kalchar.jpg)

