ಉಪ್ಪಳ: ಸಜಂಕಿಲ ಶ್ರೀ ದುರ್ಗಾ ಪರಮೇಶ್ವರೀ ಎ.ಯು.ಪಿ. ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಓಣಂ ಆಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಆಕರ್ಷಕ ಪೂಕಳಂ ರಚಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಂಪ್ರದಾಯಿಕ ವೇಷಭೂಷಣದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಓಣಂ ಹಬ್ಬದ ಮಹತ್ವ, ಅದರ ಪರಂಪರೆ ಹಾಗೂ ಸಾಂಸ್ಕøತಿಕ ವೈಶಿಷ್ಟ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು. ಓಣಂ ಸೌಹಾರ್ದತೆ, ಸಮಾನತೆ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರುವ ಹಬ್ಬವಾಗಿದ್ದು, ಅದರ ಆಶಯವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಅನುಭವಿಸಿದರು.
ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಹಕಾರದಿಂದ ಓಣಂ ಆಚರಣೆ ಯಶಸ್ವಿಯಾಗಿ ನೆರವೇರಿತು.

.jpg)
.jpg)
