HEALTH TIPS

ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಭಾರತದ ಮೊದಲ ಬ್ಯಾಟರ್ ರಿಷಭ್ ಪಂತ್

ನವದೆಹಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಶ್ರೀಲಂಕಾ ತಂಡದ ವಿರುದ್ಧ ಗಾಲೆಯಲ್ಲಿ ಮಂಗಳವಾರ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಇತಿಹಾಸ ನಿರ್ಮಿಸಿದ್ದಾರೆ. ಪಂತ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಕ್ರಿಕೆಟಿಗನಾಗಿದ್ದಾರೆ.


ಲಹಿರು ಕುಮಾರ ಅವರ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿದ ಪಂತ್ ಈ ಮೈಲಿಗಲ್ಲು ತಲುಪಿದರು. ಈ ಸಿಕ್ಸರ್‌ನ ಮೂಲಕ ಪಂತ್ ತನ್ನ 20ನೇ ಟೆಸ್ಟ್ ಅರ್ಧಶತಕ ಪೂರೈಸಿದರು. ತನ್ನ 89ನೇ ಇನಿಂಗ್ಸ್‌ನಲ್ಲಿ 100 ಸಿಕ್ಸರ್ ಪೂರೈಸಿದ ಪಂತ್ ವೇಗವಾಗಿ ಈ ಸಾಧನೆ ಮಾಡಿದರು. ಈ ಹಿಂದೆ ಭಾರತದ ಪರ ವೀರೇಂದ್ರ ಸೆಹ್ವಾಗ್ 104 ಪಂದ್ಯಗಳಲ್ಲಿ ಒಟ್ಟು 91 ಸಿಕ್ಸರ್‌ಗಳನ್ನು ಸಿಡಿಸಿದ ಸಾಧನೆ ಮಾಡಿದ್ದರು.

ಪಂತ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಆಗಿದ್ದಾರೆ. 138 ಸಿಕ್ಸರ್‌ಗಳನ್ನು ಸಿಡಿಸಿರುವ ಬೆನ್ ಸ್ಟೋಕ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಆ ನಂತರ ಬ್ರೆಂಡನ್ ಮೆಕಲಮ್(107)ಅವರಿದ್ದಾರೆ. 100 ಸಿಕ್ಸರ್‌ಗಳನ್ನು ಸಿಡಿಸಿರುವ ಪಂತ್ ಇದೀಗ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ಮಾಜಿ ವಿಕೆಟ್‌ಕೀಪರ್ ಆಯಡಮ್ ಗಿಲ್‌ಕ್ರಿಸ್ಟ್ ಕೂಡ 100 ಸಿಕ್ಸರ್ ಸಿಡಿಸಿದ್ದಾರೆ.

ಶ್ರೀಲಂಕಾದ ವೇಗದ ಬೌಲರ್ ಕುಮಾರ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್‌ನ ಮೂಲಕ ಪಂತ್ ಈ ಹೆಗ್ಗುರುತು ತಲುಪಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries