ನವದೆಹಲಿ: 'ನವದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಕಾರರವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರವು ವಿಳಂಬ ಮಾಡುತ್ತಿದೆ. ತಾನು ನೀಡಿದ್ದ ಭರವಸೆಯಂತೆ ನಡೆದುಕೊಳ್ಳಬೇಕು' ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಒತ್ತಾಯಿಸಿದೆ.
'ಪ್ರತಿಭಟನಕಾರರ ವಿರುದ್ಧ ದಾಖಲಾಗಿರುವ ಹಾಗೂ ರದ್ದುಪಡಿಸಬಹುದಾದ ಎಫ್‌ಐಆರ್‌ಗಳ ಮಾಹಿತಿ ಒದಗಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರವನ್ನು ಮಂಗಳವಾರ ಮೂರು ಬಾರಿ ಕೇಳಿದೆ. ಈ ಪ್ರಕರಣಗಳ ಮಾಹಿತಿಯನ್ನು ಕೂಡಲೇ ಸಲ್ಲಿಸಬೇಕು' ಎಂದು ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಆಗ್ರಹಿಸಿದ್ದಾರೆ.
'ಸುಪ್ರೀಂ ಕೋರ್ಟ್ ಘೋಷಿಸಿದ ಉನ್ನತಾಧಿಕಾರ ಸಮಿತಿಯಲ್ಲಿ ಸಿಜೆಪಿಯ ಸದಸ್ಯರನ್ನು ಸೇರಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

