ಬ್ಯಾಂಕಾಕ್: ಥಾಯ್ಲೆಂಡ್ನ ಶಾಲೆಯೊಂದರ ಮೇಲೆ ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ ಓರ್ವ ಶಿಕ್ಷಕ ಸೇರಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೊಂಥಬುರಿ ಬ್ಯಾಂಗ್ ಕ್ರುವಾಯಿ ಜಿಲ್ಲೆಯ ಪ್ರೌಢಶಾಲೆಯಲ್ಲಿ ಶುಕ್ರವಾರ ಈ ಗುಂಡಿನ ದಾಳಿ ನಡೆದಿದೆ.
ಗುಂಡು ಹಾರಿಸಿದ ವಿದ್ಯಾರ್ಥಿ ಶಾಲೆಯ ಒಳಗೆ ಇದ್ದಾನೆ ಎಂದು ರಾಯಲ್ ಥಾಯ್ ಪೊಲೀಸ್ ವಕ್ತಾರ ಟ್ರೈನಿಂಗ್ ಪಿವನ್ ಅಸೋಸಿಯೇಟೆಡ್ ತಿಳಿಸಿದ್ದಾರೆ.
ಫೆಬ್ರುವರಿಯಲ್ಲಿ, 17 ವರ್ಷದ ಬಾಲಕನೊಬ್ಬ ಪೋಲಿಸರಿಂದ ಗನ್ ಕದ್ದು ದಕ್ಷಿಣ ಥೈಲ್ಯಾಂಡ್ನ ಪ್ರೌಢಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದನು. ಈ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

