ನವದೆಹಲಿ : ಕಪ್ಪು ಸಮುದ್ರದಲ್ಲಿ ಸರಕುಸಾಗಣೆ ಹಡಗಿನ ಮೇಲೆ ಡ್ರೋನ್ ದಾಳಿ ನಡೆದ ಬಳಿಕ ನಾಪತ್ತೆಯಾಗಿರುವ ನಾವಿಕ, ದೀಪಕ್ ಕುಮಾರ್ ಗುಪ್ತಾ ಅವರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ.ಮೋಹನ ಅವರನ್ನು ಒಳಗೊಂಡ ನ್ಯಾಯಪೀಠವು, ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಉಕ್ರೇನ್, ರೊಮೇನಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಸಲಹೆ ಪಡೆಯುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತು.
ಬಳಿಕ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಪಟ್ಟಿ ಮಾಡಿತು. ಜುಲೈ 25ರಿಂದ ದೀಪಕ್ ಕುಮಾರ್ ಗುಪ್ತಾ ಅವರು ನಾಪತ್ತೆಯಾಗಿದ್ದಾರೆ.

