ಕೋಲ್ಕತ್ತ (PTI): 'ಭಾರತವು ಜಾಗತಿಕ ಹಡಗು ನಿರ್ಮಾಣ ಕೇಂದ್ರವಾಗುವ ಸಾಮರ್ಥ್ಯವನ್ನು ಹೊಂದಿದೆ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್ಎಸ್ಇ) ಹಾಗೂ ಯಂತ್ರ ಇಂಡಿಯಾ ಲಿಮಿಟೆಡ್ನ ₹3,500 ಕೋಟಿ ಮೊತ್ತದ ಐದು ವಿಸ್ತರಣಾ ಯೋಜನೆಗಳಿಗೆ ಭಾನುವಾರ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸಾಂಪ್ರದಾಯಿಕವಾಗಿ ಹಡಗು ನಿರ್ಮಾಣ ಮಾಡುವ ದೇಶಗಳಲ್ಲಿ ಈ ಉದ್ಯಮದಲ್ಲಿ ಸೃಷ್ಟಿಯಾಗುತ್ತಿರುವ ನಿರ್ವಾತದ ಲಾಭವನ್ನು ಪಡೆದುಕೊಳ್ಳಬೇಕು' ಎಂದು ಸಲಹೆ ನೀಡಿದ್ದಾರೆ.
'ಹಡಗು ನಿರ್ಮಾಣ ತಂತ್ರಜ್ಞಾನದಲ್ಲಿ ತ್ವರಿತ ಬೆಳವಣಿಗೆಗಳು ನಡೆಯುತ್ತಿವೆ. ಸಾಂಪ್ರದಾಯಿಕ ಹಡಗು ತಯಾರಕ ಸಂಸ್ಥೆಗಳು ನಿಧಾನಗತಿಯಲ್ಲಿ ಹಡಗುಗಳನ್ನು ತಯಾರಿಸುತ್ತಿವೆ. ಭಾರತವು ಈ ಅವಕಾಶವನ್ನೂ ಬಳಸಿಕೊಳ್ಳಬೇಕು' ಎಂದು ಸಲಹೆ ನೀಡಿದ್ದಾರೆ.
ಹಿಂದಿನ ಸರ್ಕಾರಗಳು ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಲಿಲ್ಲ. ನಮ್ಮ ಡಬಲ್ ಎಂಜಿನ್ ಸರ್ಕಾರವು ಈಗ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದೆ - ಸುವೇಂದು ಅಧಿಕಾರಿ, ಮುಖ್ಯಮಂತ್ರಿ, ಪಶ್ಚಿಮ ಬಂಗಾಳ

