HEALTH TIPS

ಭಾರತ ಗಡಿಯಲ್ಲಿನ ಪರಿಸ್ಥಿತಿ ಸ್ಥಿರ: ಚೀನಾ

ಬೀಜಿಂಗ್: 'ಚೀನಾ ಮತ್ತು ಭಾರತ ನಡುವಿನ ಗಡಿ ಉದ್ದಕ್ಕೂ ಸದ್ಯ ಪರಿಸ್ಥಿತಿ ಸ್ಥಿರವಾಗಿದೆ' ಎಂದು ಚೀನಾ ಬುಧವಾರ ಹೇಳಿದೆ. 


ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೋ ಜಿಯಾಕುನ್, 'ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವುದಕ್ಕೆ ಉಭಯ ದೇಶಗಳು ಸಮ್ಮತಿಸಿವೆ.

ಇದನ್ನು ಸಾಧಿಸಲು ರಾಜತಾಂತ್ರಿಕ ಮಾರ್ಗ ಮತ್ತು ಸೇನೆ ಮಟ್ಟದಲ್ಲಿ ಮಾತುಕತೆ ನಡೆಸುವುದಕ್ಕೂ ಒಪ್ಪಿವೆ' ಎಂದರು.

ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಚೀನಾ ಸೇನೆಯು ತನ್ನ ಚಟುವಟಿಕೆಗಳನ್ನು ಹೆಚ್ಚಿಸಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

'ಚೀನಾಕ್ಕೆ ಹೊಂದಿಕೊಂಡಿರುವ ಗಡಿ ವಿಚಾರವನ್ನು ತಾನು ಬಹಳ ಗಂಭೀರವಾಗಿ ಪರಿಗಣಿಸುವುದಾಗಿ' ಮಂಗಳವಾರ ಹೇಳಿದ್ದ ಭಾರತ, 'ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ) ಉದ್ದಕ್ಕೂ ಶಾಂತಿ ಕಾಪಾಡುವುದು ಕೂಡ ತನ್ನ ಪಾಲಿಗೆ ಮಹತ್ವದ ವಿಚಾರ' ಎಂದು ಸ್ಪಷ್ಟಪಡಿಸಿತ್ತು.

ಹೀಗಾಗಿ ಚೀನಾ ವಿದೇಶಾಂಗ ಸಚಿವಾಲಯದ ಈ ಹೇಳಿಕೆಗೆ ಮಹತ್ವ ಬಂದಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries