ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಅತ್ಯಂತ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡವು. ಪ್ರಧಾನ ಅರ್ಚಕ ಮಧುಸೂದನ ಪುಣಿಂಚಿತ್ತಾಯ ನೇತೃತ್ವದಲ್ಲಿ ಶ್ರೀ ನಾಗ ದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ನೂರಾರು ಭಕ್ತರು ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ತಂಬಿಲ ಪ್ರಸಾದ ಸ್ವೀಕರಿಸಿದರು.

.jpg)
