HEALTH TIPS

ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕದಲ್ಲಿ ಕಟ್ಟುನಿಟ್ಟಾದ ಚುನಾವಣಾ ಕಾನೂನುಗಳ ಅಗತ್ಯವನ್ನು ಪ್ರತಿಪಾದಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ. ಅಲ್ಲದೆ, ಅಮೆರಿಕದ ಚುನಾವಣೆಗಳಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದಿರುವುದನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರಶ್ನಿಸಿರುವುದನ್ನು ಅವರು ಸ್ಮರಿಸಿದ್ದಾರೆ.


ಈ ಕುರಿತು 'ಟ್ರೂಥ್ ಸೋಶಿಯಲ್'ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, 'ಭಾರತದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 64.6 ಕೋಟಿಗೂ ಹೆಚ್ಚು ಜನರು ಪಾಲ್ಗೊಂಡಿದ್ದರು, ಆದಾಗ್ಯೂ ಶೇ.1ಕ್ಕಿಂತ ಕಡಿಮೆ ಜನರು ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಿದ್ದಾರೆ' ಎಂದು ಹೇಳಿದ್ದಾರೆ.

'ಸೇವ್ ಅಮೆರಿಕ ಕಾಯ್ದೆ'ಗೆ ಬೆಂಬಲವನ್ನು ಕೋರುವ ವೇಳೆ ಮಾತನಾಡಿದ ಟ್ರಂಪ್, 'ಈ ಕಾಯ್ದೆಯು ಅಮೆರಿಕನ್ನರು ಮತದಾನಕ್ಕೆ ನೋಂದಾಯಿಸಿಕೊಳ್ಳಲು ಪೌರತ್ವದ ಸಾಕ್ಷ್ಯವನ್ನು ತೋರಿಸುವುದನ್ನು ಕಡ್ಡಾಯಗೊಳಿಸುತ್ತದೆ, ದೇಶದಾದ್ಯಂತ ಮತದಾರರ ಗುರುತಿನ ಚೀಟಿ ಕಡ್ಡಾಯ ಮಾಡುತ್ತದೆ ಮತ್ತು ಅಂಚೆ ಮೂಲಕ ಮತದಾನ ಮಾಡುವುದನ್ನು ನಿಯಂತ್ರಿಸುತ್ತದೆ' ಎಂದು ಹೇಳಿದ್ದಾರೆ.


US President Donald Trump posts on his Truth Social, "Earlier this month, India’s Chief Election Commissioner, Gyanesh Kumar, asked our Administration — How can you have Elections in the U.S. without a valid Photo ID? India’s last Election had 646,000,000 Voters! Less than 1% Show more

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries