ನವದೆಹಲಿ: ವಿಶ್ವ ಹಿಂದು ಪರಿಷತ್ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರಿಗೆ ಪೇಜಾವರ ಮಠ ಸಂಸ್ಥಾನದ ವತಿಯಿಂದ ಧರ್ಮಭೂಷಣ ಎಂಬ ವಿಶೇಷ ಪುರಸ್ಕಾರ ಘೋಷಿಸಲಾಗಿದೆ.
ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ 39 ನೇ ಚಾತುರ್ಮಾಸ್ಯ ವ್ರತದ ಅಂಗವಾಗಿ ಸೆಪ್ಟಂಬರ್ 2 ರಂದು ಸಂಜೆ ವಸಂತ್ ಕುಂಜ್ ನ ವೇದವ್ಯಾಸ ಗುರುಕುಲದಲ್ಲಿ ನಡೆಯಲಿರುವ ಸಂತ ಸಂಗಮ ಸಾಧು ಸಂತರ ಸಮಾವೇಶದಲ್ಲಿ ಈ ಪುರಸ್ಕಾರ ಪ್ರದಾನ ಮಾಡಲಾಗುವುದು .
ಅನೇಕ ವರ್ಷಗಳಿಂದ ದೇಶ ವಿದೇಶಗಳಲ್ಲಿ ಸನಾತನ ಧರ್ಮ ರಕ್ಷಣೆಗೆ ಸಲ್ಲಿಸುತ್ತಿರುವ ಕೈಂಕರ್ಯ ಮತ್ತು ಮಾರ್ಗದರ್ಶನಕ್ಕಾಗಿ ಈ ಪುರಸ್ಕಾರ ನೀಡಲಾಗುತ್ತಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.

