ಕಾಸರಗೋಡು: ಅಮೈ ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಸೆಪ್ಟೆಂಬರ್ 4 ಮತ್ತು 5ರಂದು ಜರುಗಲಿದೆ. ಅಂದು ಬೆಳಗ್ಗೆ 9ಕ್ಕೆ ಗಣಪತಿ ಹೋಮ, ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 12:00 ಗಂಟೆಗೆ ಮಹಾಪೂಜೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.
ಸೆಪ್ಟೆಂಬರ್ 5ರಂದು ಶ್ರೀ ಕೃಷ್ಣ ಗೆಳೆಯರ ಬಳಗದ ವತಿಯಿಂದ 25ನೇ ವರ್ಷದ ಸಾಂಪ್ರದಾಯಿಕ ಮೊಸರುಕುಡಿಕೆ ಉತ್ಸವ ಹಾಗೂ ಸಭಾ ಕಾರ್ಯಕ್ರಮ ನಡೆಯಲಿರುವುದು. ಸಂಜೆ 6ಕ್ಕೆ ಮಂದಿರ ಸಮಿತಿ ಗೌರವಾಧ್ಯಕ್ಷ ಗಂಗಾಧರ ಅಮೈ ಸಮಾರಂಭ ಉದ್ಘಾಟಿಸಲಿದ್ದಾರೆ.

