HEALTH TIPS

ಬಿಜೆಪಿ ಜತೆ 'ಜೆನ್‌ ಝೀ': ಗೋಯಲ್

ಮುಂಬೈ : 'ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರ ನಡುವೆ ಹೆಚ್ಚಿನ ಜನಪ್ರಿಯತೆ ಗಳಿಸುತ್ತಿರುವುದನ್ನು ಕಂಡು ರಾಹುಲ್ ಗಾಂಧಿ ಆತಂಕಗೊಂಡಿದ್ದಾರೆ' ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಪೀಯೂಷ್‌ ಗೋಯಲ್ ಭಾನುವಾರ ಹೇಳಿದರು.


'ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಅವರು ಈ ಹಿಂದೆ ತಮ್ಮನ್ನು ತಾವು 'ಯುವ ನಾಯಕ' ಎಂದು ಬಿಂಬಿಸಿಕೊಳ್ಳುತ್ತಿದ್ದರು.

ಆದರೆ, ಈಗ ಯುವಜನರಲ್ಲಿ ಅವರು ಅಂತಹ ಜನಪ್ರಿಯತೆಯನ್ನು ಹೊಂದಿಲ್ಲ' ಎಂದರು.

ಯುವ ಮತದಾರರ ಬೆಂಬಲ ಬಿಜೆಪಿಗೆ ಮುಂದುವರಿದಿದೆ ಎಂದು ಪ್ರತಿಪಾದಿಸಿದ ಗೋಯಲ್, 'ಜೆನ್‌ ಝೀ' ಯಾವಾಗಲೂ ಬಿಜೆಪಿ ಜತೆಗಿದೆ' ಎಂದು ಹೇಳಿದರು.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮೋದಿ ಅವರು ಹೊಂದಿರುವ ದೃಷ್ಟಿಕೋನಕ್ಕೆ ಯುವಜನರು ಬೆಂಬಲ ನೀಡುವುದನ್ನು ಮುಂದುವರಿಸಲಿದ್ದಾರೆ ಎಂದು ತಿಳಿಸಿದರು.

'ಮೋದಿ ಅವರು ವಿಶ್ವದ ಅತ್ಯಂತ ಜನಪ್ರಿಯ ನಾಯಕ. ಯುವಜನರೊಂದಿಗೆ ಅವರು ಹೊಂದಿರುವ ಸಂಪರ್ಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಅವರ ಸಕ್ರಿಯ ಉಪಸ್ಥಿತಿಯು ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ' ಎಂದು ಹೇಳಿದರು.

ನವದೆಹಲಿಯ ಜಂತರ್ ಮಂತರ್‌ನಲ್ಲಿ ಯುವಜನರು ನಡೆಸಿದ ಪ್ರತಿಭಟನೆ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಗೋಯಲ್, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಕೇಂದ್ರ ಸರ್ಕಾರ ನಿರ್ವಹಿಸಿದ ರೀತಿಯನ್ನು ಸಮರ್ಥಿಸಿಕೊಂಡರು. ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರವು ಕಠಿಣ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಪಾದಿಸಿದರು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries