ಕಾಸರಗೋಡು: ಬಿರುಸಿನ ಮಳೆ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿವಸಗಳಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಆ.6 ರಂದು ಪುನಾರಂಭಗೊಳ್ಳಲಿರುವುದಾಗಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಉತ್ಸಾಹದಿಂದ ಮತ್ತೆ ತರಗತಿಗಳಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಓಣಂ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚಿನ ಗಮನ ಹರಿಸಬೇಕು. ಜತೆಗೆ ಓಣಂ ಸಂಭ್ರಮ, ಕಲೋತ್ಸವ, ಕ್ರೀಡಾಕೂಟ, ವಿಜ್ಞಾನ ಮೇಳ ಸೇರಿದಂತೆ ವಿವಿಧ ಶೈಕ್ಷಣಿಕ ಹಾಗೂ ಪಠ್ಯೇತರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಮಳೆಗಾಲ ಮುಂದುವರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೆÇೀಷಕರು ಜಿಲ್ಲಾ ಆಡಳಿತದಿಂದ ನೀಡಲಾಗುವ ಮಳೆ ಹಾಗೂ ಸುರಕ್ಷತಾ ಮುನ್ನೆಚ್ಚರಿಕೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ತಿಳಿಸಿದ್ದಾರೆ.



