HEALTH TIPS

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಅಮಾನತು: ಜಿಎಂಇ ವಿವಿ

ನವದೆಹಲಿ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಅಮಾನತುಗೊಳಿಸಿ, ಕ್ಯಾಂಪಸ್‌ ಪ್ರವೇಶಕ್ಕೆ ನಿಷೇಧ ಹೇರಿದೆ.


2026-27ರ ಪ್ರವೇಶ ಪರೀಕ್ಷೆ, ಪರೀಕ್ಷಾ ಫಲಿತಾಂಶದಲ್ಲಿ ಪಾರದರ್ಶಕತೆ ಹಾಗೂ ದಾಖಲಾತಿಯ ಅಕ್ರಮ ವಿರೋಧಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಕಾರ್ಯಕತರ ಜತೆಗೆ ಜಿಎಂಇ ವಿವಿ ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆಯ ಮೂರನೇ ದಿನ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಯು ಪ್ರತಿಭಟನಾಕಾರರನ್ನು ತಡೆದು ಆ ಸ್ಥಳದಿಂದ ತೆರವುಗೊಳಿಸಿದ್ದಾರೆ ಎಂದು ಎನ್‌ಎಸ್‌ಯು‌ಐ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಎಂಇ ,'ವಿಶ್ವವಿದ್ಯಾನಿಲಯದ ಗೇಟ್ ಸಂಖ್ಯೆ 18 ರ ಬಳಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ಆದರೆ ವಿದ್ಯಾರ್ಥಿಗಳು ಕ್ಯಾಂಪಸ್‌ ಒಳಗೆ ಪ್ರವೇಶಿಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ' ಎಂದು ವಿವಿ ಹೇಳಿದೆ.

'ಈ ಕಾರಣಕ್ಕಾಗಿ ನಾಲ್ವರು ವಿದ್ಯಾರ್ಥಿಗಳನ್ನು 10 ದಿನಗಳವರೆಗೆ ಅಮಾನತು ಮಾಡಲಾಗಿದೆ. ಮುಂದಿನ ಆದೇಶದ ಬಳಿಕ ಅವರು ಕ್ಯಾಂಪಸ್‌ ಒಳಗೆ ಪ್ರವೇಶಿಸಬಹುದು. ವಿದ್ಯಾರ್ಥಿಗಳ ಕುಂದು ಕೊರತೆ ಬಗ್ಗೆ ವಿವರಣೆ ನೀಡಲು ಸಮಯ ನೀಡಲಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ವಿವಿ ಭರವಸೆ ನೀಡಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries