ನವದೆಹಲಿ (PTI): 'ಜೆನ್-ಝೀ' ಸಮುದಾಯದೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು 'ಒಂದು ದಿನ ಒಂದು ವಿಶ್ವವಿದ್ಯಾಲಯ' ಯೋಜನೆ ರೂಪಿಸಿದೆ.
ಪ್ರತಿ ದಿನ ಕೇಂದ್ರ ಸಚಿವರೊಬ್ಬರು ಒಂದು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಬೇಕು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಮತ್ತು ಅಭಿಪ್ರಾಯಗಳನ್ನು ಆಲಿಸಬೇಕು' ಎಂದು ಸೂಚಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅದ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿಶ್ವವಿದ್ಯಾಲಯಗಳೊಂದಿಗೆ ಸಹಯೋಗ ಸಾಧಿಸಿ, ಈ ಕಾರ್ಯಕ್ರಮ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.

