HEALTH TIPS

ಇಮ್ರಾನ್ ಖಾನ್ ಜೈಲಿನಲ್ಲಿ ಮೃತಪಟ್ಟಿರಬಹುದು ಎಂದ ಹಿರಿಯ ಪತ್ರಕರ್ತ; ಪಾಕಿಸ್ತಾನದ ಮಾಜಿ ಪ್ರಧಾನಿಯ ಆರೋಗ್ಯದ ಬಗ್ಗೆ ಹೆಚ್ಚಿದ ಆತಂಕ!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಯೋಗಕ್ಷೇಮದ ಬಗ್ಗೆ ನಿರಂತರವಾದ ಅನಿಶ್ಚಿತತೆಯ ನಡುವೆ ಪಾಕಿಸ್ತಾನದ ಪತ್ರಕರ್ತರೋರ್ವರು ಅವರು ಜೈಲಿನಲ್ಲಿ ಮೃತಪಟ್ಟಿರಬಹುದು ಎಂದು ಹೇಳಿದ್ದಾರೆ ಎಂದು news18.com  ವರದಿ ಮಾಡಿದೆ. 


ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥರೂ ಆಗಿರುವ ಇಮ್ರಾನ್‌ ಖಾನ್ ಅವರು ಮೃತಪಟ್ಟಿರುವ ಕುರಿತು ವದಂತಿಗಳು ಹಲವು ತಿಂಗಳುಗಳಿಂದ ಹರಿದಾಡುತ್ತಿವೆ.

ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ನಮಗೆ ಅವಕಾಶವನ್ನು ನೀಡುತ್ತಿಲ್ಲ ಎಂದು ಅವರ ಕುಟುಂಬದ ಹಲವು ಸದಸ್ಯರು ಆರೋಪಿಸಿದ್ದಾರೆ.

ಪಾಕಿಸ್ತಾನದ ಹಿರಿಯ ಪತ್ರಕರ್ತ ವಜಾಹತ್ ಸಯೀದ್ ಖಾನ್ ಅವರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ʼಮೂರು ಹಿರಿಯ ಸೇನಾ ಮೂಲಗಳು ಇಮ್ರಾನ್ ಖಾನ್ ಈಗ ನಮ್ಮೊಂದಿಗಿಲ್ಲ ಎಂದು ನನಗೆ ತಿಳಿಸಿವೆʼ ಎಂದು ಹೇಳಿದ್ದಾರೆ.

ಈ ಹೇಳಿಕೆ ನಿಜವೆಂದು ಸಾಬೀತುಪಡಿಸುವ ಯಾವುದೇ ಖಚಿತ ಸಾಕ್ಷ್ಯ ಇದುವರೆಗೆ ಲಭ್ಯವಾಗಿಲ್ಲ. ಹೀಗಾಗಿ, ಇಮ್ರಾನ್ ಖಾನ್ ಅವರ ಸಾವಿನ ಕುರಿತ ಸುದ್ದಿ ಇನ್ನೂ ದೃಢಪಟ್ಟಿಲ್ಲ.

ಮಾಜಿ ಕ್ರಿಕೆಟಿಗ ಹಾಗೂ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 2023ರಿಂದ ಅಡಿಯಾಲಾ ಜೈಲಿನಲ್ಲಿದ್ದಾರೆ. ಅವರು ಭ್ರಷ್ಟಾಚಾರ ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಇಮ್ರಾನ್ ಖಾನ್ ಅವರನ್ನು ಭೇಟಿಯಾಗದಂತೆ ಅವರ ಕುಟುಂಬಸ್ಥರಿಗೆ ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ನಾಯಕರು ಈ ಮೊದಲು ಆರೋಪಿಸಿದ್ದರು. ಕಣ್ಣಿನ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ಅವರಿಗೆ ಸಾಕಷ್ಟು ವೈದ್ಯಕೀಯ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries