HEALTH TIPS

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆ: ಅಮಿತ್ ಶಾ

ನವದೆಹಲಿ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠವನ್ನು ಸ್ಥಾಪಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವು, ಈ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ನ್ಯಾಯದ ಲಭ್ಯತೆಯನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟವು ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠವನ್ನು ಸ್ಥಾಪಿಸಲು ನಿರ್ಧರಿಸಿದೆ. ಇದು ಲಡಾಖ್‌ನ ದೂರದ ಪ್ರದೇಶಗಳಲ್ಲಿ ವಾಸಿಸುವ ನಾಗರಿಕರು ತಮಗೆ ಲಭ್ಯವಿರುವ ಕಾನೂನು ಸೇವೆಗಳನ್ನು ಪಡೆಯಲು ತಗಲುವ ಸಮಯವನ್ನು ಕಡಿಮೆ ಮಾಡುವ ಮೂಲಕ, ನ್ಯಾಯದ ಲಭ್ಯತೆಯನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ' ಎಂದು ಶಾ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಲಡಾಖ್‌ನ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಸಂವಿಧಾನಾತ್ಮಕ ರಕ್ಷಣೆಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.


Union Home Minister Amit Shah tweets, "The Union Cabinet, under the leadership of PM Narendra Modi, has decided to set up a bench of the High Court of Jammu and Kashmir in Ladakh..."

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries