ನವದೆಹಲಿ: ಟೋಕಿಯೊದ ರೆಂಕೋಜಿ ದೇಗುಲದಲ್ಲಿರುವ ನೇತಾಜಿ ಸುಭಾಷಚಂದ್ರ ಬೋಸ್ ಅವರ ಚಿತಾಭಸ್ಮವನ್ನು ಭಾರತಕ್ಕೆ ಮರಳಿ ತರಲು ನಿರ್ದೇಶನ ನೀಡುವಂತೆ ಕೋರಿ ಅವರ ಮಗಳು ಸಲ್ಲಿಸುವ ಅರ್ಜಿಯ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಬೋಸ್ ಅವರ ಪುತ್ರಿ ಅನಿತಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿ. ಮೊಹನ ಅವರಿದ್ದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಾಗಿದ್ದರು.
1945ರ ಆಗಸ್ಟ್‌ನಲ್ಲಿ ನೇತಾಜಿಯವರು ಕಣ್ಮರೆಯಾದ ಬಳಿಕ ಅವರ ಸಾವಿನ ಬಗ್ಗೆ ಹಲವು ಊಹಾಪೋಹಗಳು ಇವೆ. ಅವರ ಚಿತಾಭಸ್ಮ ಟೋಕಿಯೊದ ರೆಂಕೋಜಿ ದೇಗುಲದಲ್ಲಿ ಇದೆ ಎಂದು ಕೆಲವರು ವಾದಿಸುತ್ತಾರೆ.

