HEALTH TIPS

ಜಿಲ್ಲಾ ಮಟ್ಟದ ಓಣಂ ಆಚರಣೆ; ಸಂಸದ ರಾಜಮೋಹನ್ ಉಣ್ಣಿತ್ತಾನ್ ಉದ್ಘಾಟನೆ

ಕಾಸರಗೋಡು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ, ಕಾಸರಗೋಡು ನಗರಸಭೆ ಮತ್ತು ಜಿಲ್ಲಾಡಳಿತದ ವತಿಯಿಂದ ಕಾಸರಗೋಡಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಓಣಂ ಆಚರಣೆಯನ್ನು ಸಂಸದ ರಾಜಮೋಹನ್ ಉಣ್ಣಿತ್ತಾನ್ ಕಾಸರಗೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಮೈದಾನದಲ್ಲಿ ಉದ್ಘಾಟಿಸಿದರು. ಶಾಸಕ ಕಲ್ಲಟ್ರ ಮಾಹಿನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಜಿಲ್ಲಾ ಪೋಲೀಸ್ ಮುಖ್ಯಸ್ಥ ಪಿ. ನಿತಿನ್ ರಾಜ್ ಮುಖ್ಯ ಅತಿಥಿಗಳಾಗಿದ್ದರು.


ಕಾಸರಗೋಡು ಬ್ಲಾಕ್ ಪಂಚಾಯತಿ ಅಧ್ಯಕ್ಷ ಅಬ್ದುಲ್ಲ ಕುಂಞÂ, ಕಾರಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷೆ ಜನನಿ, ಮಧೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜ್ಞಾನಿ ಶಾನುಭೋಗ್, ಸಂಘಟನಾ ಸಮಿತಿ ಹಣಕಾಸು ಸಮಿತಿ ಅಧ್ಯಕ್ಷ ಅಡ್ವ. ಗೋವಿಂದನ್ ನಾಯರ್, ಕಾರ್ಯಕ್ರಮ ಸಮಿತಿ ಸಂಚಾಲಕ ಮಾಹಿನ್ ಕೇಳೋಟ್, ವೇದಿಕೆ ಮತ್ತು ಅಲಂಕಾರ ಸಂಚಾಲಕ ಟಿ.ಎಂ. ಇಕ್ಬಾಲ್, ವ್ಯಾಪಾರಿಗಳ ಸಂಘದ ಪ್ರತಿನಿಧಿ ಎ.ಎ. ಅಜೀಜ್ ಮಾತನಾಡಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೆ.ಖಾಲಿದ್, ಮುಹಮ್ಮದ್ ಹನೀಫಾ, ಹ್ಯಾರಿಸ್ ಚೂರಿ, ವಿ.ರಾಜನ್, ಸುಲೈಮಾನ್ ಉವೈಸ್, ಪಿ.ಆರ್. ಸುನಿಲ್, ಹರೀಶ್ ಬಿ.ನಂಬಿಯಾರ್, ನ್ಯಾಷನಲ್ ಅಬ್ದುಲ್ಲಾ, ವಿ.ಕೆ. ರವೀಂದ್ರನ್ ಮತ್ತು ಡಿಪಿಸಿ ಕಾರ್ಯದರ್ಶಿ ಜಿಜೇಶ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಸರಗೋಡು ನಗರಸಭೆ ಅಧ್ಯಕ್ಷೆ ಶಾಹಿನಾ ಸಲೀಂ ಸ್ವಾಗತಿಸಿ, ಕಾಸರಗೋಡು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಎಂ.ಎ. ನಸೀಬ್ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries