HEALTH TIPS

ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಓಣಂ ಹಬ್ಬ ಆಚರಣೆ

ಬದಿಯಡ್ಕ: ಬೇಳ ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಊರ ಭಕ್ತ ಬಾಂಧವರ ಪೂರ್ಣ ಸಹಯೋಗದೊಂದಿಗೆ ಮಂಗಳವಾರ ಓಣಂ ಹಬ್ಬ ಆಚರಣೆಯನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿತು. 


ದಿನವಿಡೀ ನಡೆದ ಆಚರಣೆಯ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಮಹನೀಯರಿಗೆ ವಿವಿಧ ಕ್ರೀಡೆ ಮತ್ತು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಊರಿನ ಸಮಸ್ತ ಭಕ್ತಾದಿಗಳು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ತದನಂತರ ಮಹಿಳೆಯರಿಂದ ಕೇರಳದ ಸಾಂಪ್ರದಾಯಿಕ 'ತಿರುವಾದಿರ' ನೃತ್ಯ, 'ಓಣಂ ಪಾಟ್' (ಓಣಂ ಹಾಡುಗಳು) ಹಾಗೂ ಜ್ಞಾನವರ್ಧಕ ರಸಪ್ರಶ್ನೆ ಸ್ಪರ್ಧೆಯಂತಹ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ಮಧ್ಯಾಹ್ನ ಬಂದಂತಹ ಎಲ್ಲಾ ಭಕ್ತಾದಿಗಳಿಗೆ ಕಣ್ಣು-ಮನ ತುಂಬುವಂತಹ ಸುಕೃತಿಯ ಓಣಂ ಸದ್ಯ (ಸಂಪ್ರದಾಯಿಕ ಓಣಂ ಔತಣ) ಉಣಬಡಿಸಲಾಯಿತು.

ಮಧ್ಯಾಹ್ನದ ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ತಂತ್ರಿವರ್ಯರು ಹಾಗೂ ಆಡಳಿತ ಮೊಕ್ತೇಸರರಾದ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಉಳಿಯತ್ತಾಯ ವಿಷ್ಣು ಅಸ್ರರು ವಹಿಸಿ ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉದ್ಯಮಿ  ವಸಂತ ಪೈ ಬದಿಯಡ್ಕ ಅವರು ಶುಭ ಹಾರೈಸಿದರು.


ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಧರ ಪ್ರಸಾದ್, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಹೆಬ್ಬಾರ್ ಹಾಗೂ ಮಾತೃ ಸಮಿತಿಯ ಅಧ್ಯಕ್ಷರಾದ ಡಾ. ಮಾಲತಿ ಪ್ರಕಾಶ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿ, ಮಾತೃ ಸಮಿತಿ ಉಪಾಧ್ಯಕ್ಷೆ ವಾಣಿ ಪಿ. ಎಸ್. ವಂದಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಅಪ್ಪಣ್ಣ ಸೀತಾಂಗೋಳಿ ಕಾರ್ಯಕ್ರಮ ನಿರೂಪಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries