HEALTH TIPS

ಜಿಲ್ಲಾ ಮಟ್ಟದ ಓಣಂ ಆಚರಣೆ-ಇಂದು ಸಂಘಟನಾ ಸಮಿತಿ ರಚನೆ

ಕಾಸರಗೋಡು: ಜಿಲ್ಲಾ ಮಟ್ಟದಲ್ಲಿ ಓಣಂ ಹಬ್ಬವನ್ನು ವ್ಯಾಪಕವಾಗಿ ಆಚರಿಸಲು ಸ್ವಾಗತಸಂಘ ನಡೆಸುವ ನಿಟ್ಟಿನಲ್ಲಿ, ಜಿಲ್ಲಾ ಮಟ್ಟದ ಸಂಘಟನಾ ಸಮಿತಿ ಸಭೆ ಆಗಸ್ಟ್ 17ರಂದು ಮಧ್ಯಾಹ್ನ 2:00 ಗಂಟೆಗೆ ಕಾಸರಗೋಡು ಸರ್ಕಾರಿ ಅತಿಥಿ ಗೃಹದ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಶಾಸಕ ಕಲ್ಲಾತ್ರಾ ಮಹಿನ್ ಅಧ್ಯಕ್ಷತೆ ವಹಿಸುವರು.

ರಾಜ್ಯ ಪ್ರವಾಸೋದ್ಯಮ ಇಲಾಖೆಯ ಆಶ್ರಯದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಜಿಲ್ಲಾ ಮಟ್ಟದ ಓಣಂ ಆಚರಣೆಯ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಸ್ಥಳ, ದಿನಾಂಕ, ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳು, ಆರ್ಥಿಕ ವ್ಯವಸ್ಥೆಗಳು ಮತ್ತು ಪ್ರಾಯೋಜಕತ್ವಕ್ಕೆ ಸಂಬಂಧಿಸಿದ ರೂಪುರೇಷೆ ಸಿದ್ಧಪಡಿಸಲಾಗುವುದು.  

ಈ ಸಂದರ್ಭ ಸಾಂಸ್ಕøತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಪ್ರಚಾರ ಚಟುವಟಿಕೆಗಳು ಹಾಗೂ ವೇದಿಕೆ, ದೀಪಾಲಂಕಾರ ಮತ್ತು ಧ್ವನಿ ವ್ಯವಸ್ಥೆ.ವ್ಯವಸ್ಥೆಗಳು, ಭದ್ರತಾ ಕ್ರಮಗಳು, ಸಂಚಾರ ನಿಯಂತ್ರಣ, ನೈರ್ಮಲ್ಯ ಮತ್ತು 'ಹಸಿರು ಶಿಷ್ಟಾಚಾರ'  ಕುರಿತಾಗಿಯೂ ಅಗತ್ಯ ನಿರ್ಧಾರ ಕೈಗೊಳ್ಳಲಾಗುವುದು. ಸಾರ್ವಜನಿಕ ಭಾಗವಹಿಸುವಿಕೆಯೊಂದಿಗೆ ಜಿಲ್ಲಾ ಮಟ್ಟದ ಓಣಂ ಆಚರಣೆಗಳನ್ನು ಯಶಸ್ವಿಯಾಗಿ ಆಯೋಜಿಸಲು ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು ಮತ್ತು ಜನಪ್ರತಿನಿಧಿಗಳ ಸಹಕಾರವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟನಾ ಸಮಿತಿಯೊಂದನ್ನು ರಚಿಸಲಾಗುತ್ತಿರುವುದಾಗಿ ಪ್ರಕಟಣೆ ತಿಳಿಸಿದೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries