HEALTH TIPS

ಸೌದಿ ಯುವರಾಜನೊಂದಿಗೆ ಡ್ರೋನ್ ಒಪ್ಪಂದದ ಬಗ್ಗೆ ಚರ್ಚೆ ನಡೆಸಿದ ಉಕ್ರೇನ್ ಅಧ್ಯಕ್ಷ

ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದ್ವಿಪಕ್ಷೀಯ ಡ್ರೋನ್ ಒಪ್ಪಂದ ಹಾಗೂ ಜಾಗತಿಕ ಆಹಾರ ಭದ್ರತೆ ಕುರಿತು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.


ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಝೆಲೆನ್ಸ್ಕಿ, "ನಮ್ಮ ದೇಶಗಳ ನಡುವಿನ ಡ್ರೋನ್ ಒಪ್ಪಂದದ ಭಾಗವಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದ್ದೇವೆ" ಎಂದು ಹೇಳಿದ್ದಾರೆ.

ಇದೇ ವೇಳೆ, ಸೌದಿ ಅರೇಬಿಯಾ ಇತ್ತೀಚೆಗೆ ಟರ್ಕಿ ಮತ್ತು ಪಾಕಿಸ್ತಾನದೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಭವಿಷ್ಯದ ನಿರೀಕ್ಷೆಗಳ ಬಗ್ಗೆಯೂ ಮುಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

"ಜಾಗತಿಕ ಅಗತ್ಯವಾಗಿರುವ ಆಹಾರ ಭದ್ರತೆಗೆ ನಮ್ಮ ದೇಶಗಳು ಇನ್ನಷ್ಟು ಸಕಾರಾತ್ಮಕ ಕೊಡುಗೆ ನೀಡುವಂತೆ, ನಮ್ಮ ನಿಲುವುಗಳು ಮತ್ತು ಸಂಪರ್ಕಗಳನ್ನು ಸಮನ್ವಯಗೊಳಿಸಿದ್ದೇವೆ" ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಮತ್ತು ಸೌದಿ ಅರೇಬಿಯಾ ಕಳೆದ ಮಾರ್ಚ್‌ನಲ್ಲಿ ದ್ವಿಪಕ್ಷೀಯ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದ್ದವು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries