ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಆ.29 ಶನಿವಾರ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ವೇದಮೂರ್ತಿ ಹರಿನಾರಾಯಣ ಮಯ್ಯರ ನೇತೃತ್ವದಲ್ಲಿ ಶ್ರೀಗುರುಪೀಠ ಪ್ರತಿಷ್ಠಾ ವರ್ಧಂತಿ ಮತ್ತು ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 8:30ಕ್ಕೆ ಶ್ರೀಗಣಪತಿ ಹವನ, ಪೂರ್ವಾಹ್ಣ 10 ರಿಂದ ಶ್ರೀಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.15ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು. ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀಗಾಯತ್ರೀ ಮಾತೆ ಮತ್ತು ಶ್ರೀನಿತ್ಯಾನಂದ ಗುರುಗಳ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಶ್ರೀಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

