HEALTH TIPS

ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆ ಅವಲೋಕನ ಸಭೆ-ಕಾಮಗಾರಿ ಶೀಘ್ರ ಪೂರೈಸಲು ಸಚಿವರ ಖಡಕ್ ಸೂಚನೆ

ಕಾಸರಗೋಡು: ಬದಿಯಡ್ಕ ಪಂಚಾಯಿತಿ ಹಾಗೂ ಎಣ್ಮಕಜೆ ಪಂಚಾಯಿತಿಯ ಗಡಿಪ್ರದೇಶ ಉಕ್ಕಿನಡ್ಕದಲ್ಲಿ ತಲೆಯೆತ್ತಲಿರುವ ಕಾಸರಗೋಡು ವೈದ್ಯಕೀಯ ಕಾಲೇಜು ಆಸ್ಪತ್ರೆ ಕಾಮಗಾರಿ ಬಗ್ಗೆ ಅವಲೋಕನಾ ಸಭೆ ಶುಕ್ರವಾರ ಆಸ್ಪತ್ರೆ ಆಡಳಿತ ವಿಭಾಗ ಕಟ್ಟಡದ ಸಭಾಂಗಣದಲ್ಲಿ ನೆರವೇರಿತು. 


ರಾಜ್ಯ ಸ್ಥಳೀಯಾಡಳಿತ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ ಶಾಜಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶೈಕ್ಷಣಿಕ ಕಟ್ಟಡದ ನಿರ್ಮಾಣ ಕಾರ್ಯವನ್ನು ಅಕ್ಟೋಬರ್ ವೇಳೆಗೆ ಹಾಗೂ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾಮಗಾರಿ 2027 ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಿತು. ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕೆಂದು ಸಚಿವ ಕೆ.ಎಂ. ಶಾಜಿ ಅಧಿಕಾರಿಗಳಿಗೆ ಸೂಚಿಸಿದರು.

 ಎಂಬಿಬಿಎಸ್ ತರಗತಿಯ ಹೊಸ ಬ್ಯಾಚ್‍ನ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಅಗತ್ಯ ಮೂಲಸೌಕರ್ಯ ಸೌಲಭ್ಯಗಳನ್ನು ನಿಗದಿತ ಕಾಲಾವಧಿಯೊಳಗೆ, ಶೀಘ್ರವಾಗಿ ಪೂರ್ಣಗೊಳಿಸಬೇಕು.  ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುವುದಾಗಿ ಹಾಗೂ ಹಣಕಾಸು ಇಲಾಖೆಯಿಂದ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಮೀಸಲಿಟ್ಟಿರುವ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.  

ವೈದ್ಯಕೀಯ ಕಾಲೇಜಿನ ಪೂರ್ಣ ಪ್ರಮಾಣದ ಕಾರ್ಯನಿರ್ವಹಣೆಗೆ ಅಗತ್ಯವಿರುವ ಹುದ್ದೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು. 

ಈ ವರ್ಷದ ಡಿಸೆಂಬರ್ ವೇಳೆಗೆ ಬಾಲಕಿಯರ ವಸತಿ ನಿಲಯದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಸಹ ನಿರ್ಧರಿಸಲಾಯಿತು. ಅಲ್ಲದೆ, ವಸತಿ ನಿಲಯಕ್ಕೆ ಅಗತ್ಯವಿರುವ ಹೆಚ್ಚುವರಿ ಪೀಠೋಪಕರಣಗಳನ್ನು 'ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್' ಅಡಿಯಲ್ಲಿ ಖರೀದಿಸಲು ತೀರ್ಮಾನಿಸಲಾಯಿತು. ಒಂದು ವಾರದೊಳಗೆ ಕಿಫ್‍ಬಿ, ಊರಾಲುಂಗಾಲ್ ಸೊಸೈಟಿ ಮತ್ತು 'ಕಿಟ್ಕೋ'ಸಂಸ್ಥೆಗಳನ್ನೊಳಗೊಂಡ ಸಭೆಯೊಂದನ್ನು ನಡೆಸಿ ಕಾಂಗಾರಿ ತ್ವರಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಘುವುದು. ನಿರ್ದೇಶಕರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲು ಮತ್ತು ನಿರ್ಮಾಣ ಸ್ಥಳಕ್ಕೆ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಲು ನಿರ್ಧರಿಸಲಾಯಿತು.

ವೈದ್ಯಕೀಯ ಕಾಲೇಜಿನಲ್ಲಿ ಪ್ರಯೋಗಾಲಯ ಸೌಲಭ್ಯಗಳನ್ನು 75 ದಿನಗಳೊಳಗೆ ಸ್ಥಾಪಿಸಲಾಗುವುದು ಎಂದು ಕೆಎಂಸಿಎಲ್ ಪ್ರತಿನಿಧಿ ಸಭೆಗೆ ತಿಳಿಸಿದರು. ವೈದ್ಯಕೀಯ ಕಾಲೇಜು ಕಟ್ಟಡಗಳ ನಿರ್ಮಾಣದಲ್ಲಿನ ಯಾವುದೇ ವಿಳಂಬವುಂಟಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಕಲ್ಲಟ್ರ ಮಾಹಿನ್ ಹಾಜಿ ತಿಳಿಸಿದರು. ವಿದ್ಯಾರ್ಥಿಗಳ ವಸತಿ ನಿಲಯವನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಮಾಡಲು ಶಾಸಕರು ಸೂಚನೆ ನೀಡಿದರು.

ಶೈಕ್ಷಣಿಕ ಕಟ್ಟಡ, ಆಸ್ಪತ್ರೆ ಕಟ್ಟಡ, ವಸತಿ ನಿಲಯಗಳು ಮತ್ತು ಸಂಬಂಧಿತ ಸೌಲಭ್ಯಗಳ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಸಂಬಂಧಪಟ್ಟ ನಿರ್ಮಾಣ ಸಂಸ್ಥೆಗಳಿಗೆ ಸೂಚಿಸಿದರು. ಬಾಲಕಿಯರ ವಸತಿ ನಿಲಯದ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿಗೆ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದರು.  ಶಾಸಕ ಎ.ಕೆ.ಎಂ ಅಶ್ರಫ್, ಕಾಸರಗೋಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಅಬ್ದುಲ್ಲಕುಞÂ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries