ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳವು ಪ್ರಕರಣದ ನಡುವೆಯೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಾಯಕ ಸುರೇಶ್ ಭಯ್ಯಾಜಿ ಜೋಶಿ ಅವರು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ 'ಪೋಷಕ' ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜೋಶಿ ಅವರನ್ನು ಟ್ರಸ್ಟ್‌ನ 'ಪೋಷಕ' ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಇದಕ್ಕೂ ಮುನ್ನ, ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಮತ್ತು ವಿಶೇಷ ಆಹ್ವಾನಿತ ಗೋಪಾಲ್‌ರಾವ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಜೋಶಿ ಅವರು ಟ್ರಸ್ಟ್‌ನ ಸಭೆಗಳಿಗೆ ವಿಶೇಷ ಆಹ್ವಾನಿತರಾಗಿ ಹಾಜರಾಗುತ್ತಿದ್ದರು.

