ನವದೆಹಲಿ:ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಗುರುವಾರ ಚಿಕಿತ್ಸೆಗಾಗಿ ದಿಲ್ಲಿಯ ಏಮ್ಸ್ ಗೆ ದಾಖಲಿಸಲಾಗಿದೆ.
ನಡ್ಡಾರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಅವರನ್ನು ಕರೊನರಿ ಆಯಂಜಿಯೊಗ್ರಾಫಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ.
ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದ್ದು, ಅವರನ್ನು ನಿಗಾವಣೆಯಲ್ಲಿರಿಸಲು ಹೃದ್ರೋಹ ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಏಮ್ಸ್ ತಿಳಿಸಿವೆ.

