HEALTH TIPS

ಇರಾನ್ ಮೇಲಿನ ನಿರ್ಬಂಧ ಸಮಸ್ಯೆಗೆ ಪರಿಹಾರವಲ್ಲ: ಚೀನಾ

ಬೀಜಿಂಗ್: ಮಧ್ಯಪ್ರಾಚ್ಯ ಸಂಘರ್ಷಕ್ಕೆ ಅಮೆರಿಕದ ನಿರ್ಬಂಧಗಳು ಮತ್ತು ಒತ್ತಡಗಳು ಪರಿಹಾರ ತರಲಾರವು ಎಂದು ಚೀನಾ ಶುಕ್ರವಾರ ಹೇಳಿದೆ. ಇರಾನ್ ಅರ್ಥವ್ಯವಸ್ಥೆಯನ್ನು ಪ್ರತ್ಯೇಕಿಸುವ ಪ್ರಯತ್ನಗಳಲ್ಲಿ ಚೀನಾ ಸೇರಿದಂತೆ ಇತರ ಸರಕಾರಗಳು ಭಾಗಿಯಾಗಬೇಕು ಎಂದು ಅಮೆರಿಕ ಮನವಿ ಮಾಡಿದ ನಂತರ ಚೀನಾ ಈ ಹೇಳಿಕೆ ನೀಡಿದೆ.


`ನಿರ್ಬಂಧಗಳು ಮತ್ತು ಒತ್ತಡಗಳು ಈ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡುವುದಿಲ್ಲ. ಸಂಬಂಧಪಟ್ಟ ಎಲ್ಲಾ ಕಡೆಯವರು ಜವಾಬ್ದಾರಿಯುತ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಜಕೀಯ ಹಾಗೂ ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಎಂಬುದು ಚೀನಾದ ನಿಲುವಾಗಿದೆʼ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

` ಅಂತರರಾಷ್ಟ್ರೀಯ ಕಾನೂನಿನಲ್ಲಿ ಯಾವುದೇ ಆಧಾರವಿಲ್ಲದ ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಅಧಿಕಾರ ಪಡೆಯದ ಕಾನೂನುಬಾಹಿರ ಏಕಪಕ್ಷೀಯ ನಿರ್ಬಂಧಗಳನ್ನು ಚೀನಾ ವಿರೋಧಿಸುತ್ತದೆ' ಎಂದು ಲಿನ್ ಹೇಳಿದರು.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries