ಮಂಜೇಶ್ವರ: ಹೊಸಂಗಡಿ ಸನಿಹ ಪೊಸೋಟ್ ಎಂಬಲ್ಲಿ ಹೆದ್ದಾರಿಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿವೈಡರ್‍ಗೆ ಡಿಕ್ಕಿಯಾದ ಪರಿಣಾಂ ಚಾಲಕ ಸೇರಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕಾಸರಗೋಡಿನಿಂದ ಮಂಗಳೂರಿಗೆ ತೆರಳುವ ಮಧ್ಯೆ ಅಪಘಾತ ನಡೆದಿದೆ. ಬಸ್ ಎದುರು ಭಾಗ ಜಖಂಗೊಂಡಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆದರು. ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಮಡಿದ್ದಾರೆ. ಸರ್ವೀಸ್ ರಸ್ತೆಯಲ್ಲಿ ಸಂಚರಿಸಬೇಕಾದ ಬಸ್‍ಗಳು ಹೆದ್ದಾರಿ ಮೂಲಕವೇ ಸಂಚರಿಸುತ್ತಿರುವುದರಿಂದ ಸಕಾಲಕ್ಕೆ ಬಸ್ ಲಭ್ಯವಾಗದೆ ಸಮಸ್ಯೆ ಎದುರಾಗುತ್ತಿರುವುದಾಗಿ ಪ್ರಯಾಣಿಕರು ದೂರಿದ್ದಾರೆ.

