HEALTH TIPS

ಮುಂಬೈ| ಮರಾಠಿ ಕಲಿಕೆಗೆ ಒಂದು ವರ್ಷ ಸಮಯ: ದೇವೆಂದ್ರ ಫಡಣವೀಸ್‌

ಮುಂಬೈ: ಮರಾಠಿ ಕಲಿಕೆಗಾಗಿ ಆಟೊ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ವರ್ಷ ಸಮಯ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ದೇವೆಂದ್ರ ಫಡಣವೀಸ್‌ ಗುರುವಾರ ತಿಳಿಸಿದರು.


ಈ ಅವಧಿಯಲ್ಲಿ ರಾಜ್ಯದ ಅಧಿಕೃತ ಭಾಷೆಯ ಅರಿವು ಇರದ ಚಾಲಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

'ಆಟೊ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಪ್ರತಿನಿಧಿಗಳು ನನ್ನನ್ನು ಭೇಟಿಯಾಗಿ ನೂತನ ನಿಯಮಕ್ಕೆ ಬೆಂಬಲ ವ್ಯಕ್ತಪಡಿಸಿದರು. ಆದರೆ, ಮರಾಠಿ ಕಲಿಕೆಗೆ ಒಂದು ವರ್ಷ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸರ್ಕಾರ ಅವರ ಮನವಿಗೆ ಸಹಮತ ವ್ಯಕ್ತಪಡಿಸಿದೆ. ಒಂದು ವರ್ಷದಲ್ಲಿ ಮರಾಠಿ ತರಗತಿಗಳನ್ನು ಆಯೋಜಿಸಲಾಗುತ್ತದೆ ಮತ್ತು ಅಧ್ಯಯನ ಸಾಮಗ್ರಿಗಳನ್ನು ವಿತರಿಸಲಾಗುತ್ತದೆ' ಎಂದು ತಿಳಿಸಿದರು.

ಸರ್ಕಾರ ಕಳೆದ ಏಪ್ರಿಲ್‌ನಲ್ಲಿ, ಚಾಲಕರು 'ಮರಾಠಿ' ಭಾಷೆ ಕಲಿಯುವುದನ್ನು ಕಡ್ಡಾಯಗೊಳಿಸಿ, ಆಗಸ್ಟ್‌ 15ರ ಗಡುವು ನಿಗದಿ ಮಾಡಿತ್ತು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries