HEALTH TIPS

ನಗದು ಪತ್ತೆ ಪ್ರಕರಣದಲ್ಲಿ ನಿವೃತ್ತ ನ್ಯಾಯಮೂರ್ತಿ ವರ್ಮಾ ತಪ್ಪಿತಸ್ಥ: ಸಮಿತಿ

ನವದೆಹಲಿ: 'ತಮ್ಮ ನಿವಾಸದಲ್ಲಿ ಪತ್ತೆಯಾದ ಹಣದ ಮೂಲವನ್ನು ವಿವರಿಸುವಲ್ಲಿ ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ವಿಫಲವಾಗಿರುವುದರಿಂದ ಅವರ ವಿರುದ್ಧದ ಆರೋಪ ಸಾಬೀತಾಗಿದೆ' ಎಂದು ಸಂಸದೀಯ ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.


'ನವದೆಹಲಿಯ ತುಘಲಕ್ ಕ್ರೆಸೆಂಟ್‌ನಲ್ಲಿರುವ ವರ್ಮಾ ಅವರ ನಿವಾಸದಲ್ಲಿ 500 ಮುಖಬೆಲೆಯ ನೋಟಿನ ಕಂತೆಗಳು ಪತ್ತೆಯಾಗಿದ್ದವು.

ಆದರೆ ನಗದಿನ ಮೂಲದ ಬಗ್ಗೆ ತೃಪ್ತಿಕರ ವಿವರಣೆ ನೀಡಲು ಅವರು ವಿಫಲರಾಗಿದ್ದಾರೆ' ಎಂದು ಸಮಿತಿಯು ತಿಳಿಸಿದೆ.

ಆದಾಗ್ಯೂ, 'ನ್ಯಾಯಮೂರ್ತಿಗಳು ವೈಯಕ್ತಿಕವಾಗಿ ಹಣವನ್ನು ಸ್ಥಳಾಂತರಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ' ಎಂದು ಸಮಿತಿಯು ಗಮನಿಸಿದೆ.

ಇದಕ್ಕೂ ಮುನ್ನ, ಆಗಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಚಿಸಿದ್ದ ಆಂತರಿಕ ಸಮಿತಿಯು, ನಗದು ಸಿಕ್ಕಿದ್ದ ಕೊಠಡಿಯ ಮೇಲೆ ವರ್ಮಾ ಅವರು ನಿಯಂತ್ರಣ ಹೊಂದಿದ್ದರು ಎಂದು ಹೇಳಿತ್ತು.

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ವರ್ಮಾ ಅವರನ್ನು ಈ ವಿವಾದದ ಬಳಿಕ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು. ನಂತರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries