HEALTH TIPS

ಪೆರ್ಲ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ಗುರುಜಯಂತಿ, ಗೌರವಾರ್ಪಣೆ, ಪ್ರತಿಭಾ ಪುರಸ್ಕಾರ

ಪೆರ್ಲ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪೆರ್ಲ ಘಟಕ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆ. 30ರಂದು ಪೆರ್ಲ ವ್ಯಾಪಾರಿ ಭವನ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಪೆರ್ಲ ಪಡ್ರೆ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಬಿ. ಪಿ. ಶೇಣಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ಕಾನ, ಮಹಿಳಾ ಸಂಘದ ಅಧ್ಯಕ್ಷೆ ರುಕ್ಮಿಣಿ ಬೆದ್ರಂಪಳ್ಳ ಉಪಸ್ಥಿತರಿದ್ದರು. 

ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಯಿತು. ಆಗೋಸ್ತು 30ರಂದು ಪೆರ್ಲ ವ್ಯಾಪಾರ ಭವನದ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಹಿಳಾ ಸಂಘದವರಿಂದ ಭಜನೆ, 10ಕ್ಕೆ ಧಾರ್ಮಿಕ ಸಭೆ ಜರಗಲಿರುವುದು.ಈ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಗುರುತಿಸಿ ಕೊಂಡ ಸಮಾಜ ಭಾಂಧದವರಿಗೆ ಗೌರವಾರ್ಪಣೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಆ.23ರಂದು ಇಡಿಯಡ್ಕ ಶ್ರೀ ದುರ್ಗಾ ಪರಮೇಶ್ವರಿ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲಾಗಿದ್ದು,  ಎಲ್ ಪಿ, ಯು ಪಿ, ಹೈಸ್ಕೂಲ್ ಅಲ್ಲದೆ ಸಾರ್ವಜನಿಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿರುವುದು. 

ಪ್ರತಿಭಾ ಪುರಸ್ಕಾರಕ್ಕೆ ಕಳೆದ ಶೈಕ್ಷಣಿಕ ವರ್ಷದಲ್ಲಿ (2025-2026) ಎಸ್ಸೆಸೆಲ್ಸಿ, ಪ್ಲಸ್ ಟು ಪರೀಕ್ಷೆಯಲ್ಲಿ ಎಲ್ಲಾ ವಿಭಾಗಗಳಲ್ಲಿ ಎ-ಪ್ಲಸ್ ಪಡೆದವರು, ಪದವಿ, ಸ್ನಾತಕೋತರ ಪದವಿ, ಇನ್ನಿತರ ಕೊರ್ಸುಗಳಲ್ಲಿ ಡಿಸ್ಟಿಂಕ್ಷನ್ ಪಡೆದವರನ್ನು ಪರಿಗಣಿಸಲಾಗುವುದು. ವಿದ್ಯಾರ್ಥಿಗಳು ಅಥವಾ ಪೆÇೀಷಕರು ತಮ್ಮಅಂಕಪಟ್ಟಿಯ ಪ್ರತಿಯೊಂದಿಗೆ ಅಧ್ಯಕ್ಷರು, ಕಾರ್ಯದರ್ಶಿ ಅಥವಾ ಸಂಘಟನೆ ಪದಾಧಿಕಾರಿಗಳಲ್ಲಿ ಆಗಸ್ಟ್ 25ರ ಮೊದಲು ಹೆಸರು ನೀಡಬೇಕು.  

ಸಭೆಯಲ್ಲಿ ರಾಮಣ್ಣ ಪೂಜಾರಿ ಬಾಂಕಾನ, ಡಾ. ಕೃಷ್ಣ ಮೋಹನ ಬಜಕೂಡ್ಲು, ರಾಜೇಶ್ವರಿ ಕಾನ, ಹರ್ಷ ಕುಮಾರ್ ನಲ್ಕ, ನಾರಾಯಣ ಪೂಜಾರಿ ಶೇಣಿ, ರಾಮಣ್ಣ ಪೂಜಾರಿ ಬಿ. ಸಿ. ಬೆದ್ರಂಪಳ್ಳ, ಪ್ರವೀಣ್ ಕುಮಾರ್ ಅರೆಮಂಗಿಲ, ಐತಪ್ಪ ಪೂಜಾರಿ ಬಲ್ತಕಲ್ಲು, ಪುರುಷೋತ್ತಮ ಬಜಕೂಡ್ಲು ಮೊದಲಾದವರು ಉಪಸ್ಥಿತರಿದ್ದರು.

 

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries