ಬದಿಯಡ್ಕ: ಚಿನ್ಮಯ ವಿದ್ಯಾಲಯದಲ್ಲಿ ಆರಾಧನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು.
ಪೂಜಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ ನಡೆಯಿತು. ಭಜನೆ ಮತ್ತು ಪೂಜೆಯ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಾಣಗೊಂಡಿತು. ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

.jpg)
