ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೇಂದ್ರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹೊರಡಿಸಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ನಾಳೆ (ಮಂಗಳವಾರ, ಆಗಸ್ಟ್ 4) ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‍ಇ, ಸಿಬಿಎಸ್‍ಇ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ. ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಾಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಇವಲ್ಲಿ ಒಳಗೊಂಡಿದೆ.
ಪೂರ್ವ ನಿಗದಿಯಾಗಿದ್ದ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಇತರ ನಾ;ಕು ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಣೆ:
ತಿರುವನಂತಪುರಂ: ರಾಜ್ಯದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ 5 ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಕೊಟ್ಟಾಯಂ, ಕೋಝಿಕ್ಕೋಡ್, ಮಲಪ್ಪುರಂ, ಆಲಪ್ಪುಳ ಮತ್ತು ಪತ್ತನಂತಿಟ್ಟ ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ನಾಳೆ (ಮಂಗಳವಾರ, ಆಗಸ್ಟ್ 4, 2026) ರಜೆ ಘೋಷಿಸಿದ್ದಾರೆ.
ವೃತ್ತಿಪರ ಕಾಲೇಜುಗಳು, ಮದರಸಗಳು, ಬೋಧನಾ ಕೇಂದ್ರಗಳು ಮತ್ತು ಅಂಗನವಾಡಿಗಳಿಗೂ ರಜೆ ಅನ್ವಯಿಸುತ್ತದೆ. ಜಿಲ್ಲೆಗಳಲ್ಲಿ ನಿಗದಿಪಡಿಸಲಾದ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ.
ಕಣ್ಣೂರು ಜಿಲ್ಲೆಯ 3 ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ನಾಳೆ ರಜೆ ಘೋಷಿಸಿದ್ದಾರೆ. ಪಯ್ಯನ್ನೂರು, ತಳಿಪರಂಬ ಮತ್ತು ಇರಿಟ್ಟಿ ತಾಲ್ಲೂಕುಗಳಲ್ಲಿ ರಜೆ ಘೋಷಿಸಲಾಗಿದೆ.
ಆದಾಗ್ಯೂ, ವೃತ್ತಿಪರ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ಜಿಲ್ಲೆಗಳಲ್ಲಿ ನಿಗದಿಯಾಗಿರುವ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ವಯನಾಡ್ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಪರಿಹಾರ ಶಿಬಿರಗಳನ್ನು ನಿರ್ವಹಿಸುತ್ತಿರುವ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.


