ಮುಳ್ಳೇರಿಯ: ಇತಿಹಾಸ ಪ್ರಸಿದ್ಧ ನೆಟ್ಟಣಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದ ಬಾಗಿಲು ಒಡೆದು ನುಗ್ಗಿದ ಕಳ್ಳರು ಗರ್ಭಗುಡಿ ಎದುರಿನ ಕಾಣಿಕೆ ಹುಂಡಿ ಎಗರಿಸಿದ್ದಾರೆ. ನಂತರ ಕಾಣಿಕೆ ಹುಂಡಿಯ ಬೀಗ ಒಡೆಯಲು ವಿಫಲ ಯತ್ನ ನಡೆಸಿದ್ದು, ಕಾಣಿಕೆ ಹುಂಡಿಯನ್ನು ರಸ್ತೆಯ ಅಂಚಿಗೆ ಬಿಟ್ಟು ಪರಾರಿಯಾಗಿದ್ದಾರೆ.
ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರು ಆಗಮಿಸಿದಾಗ ಕಳವು ಬೆಳಕಿಗೆ ಬಂದಿದೆ.
ದೇವಾಲಯದ ಅಧಿಕಾರಿಗಳು ನೀಡಿದ ದೂರಿನನ್ವಯ ಆದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬೆಳ್ಳೂರು-ನೆಟ್ಟಣಿಗೆ ಮಹಾಲಿಂಗೇಶ್ವರ ದೇವಾಲಯವು ಮಲಬಾರ್ ದೇವಸ್ವಂ ಮಂಡಳಿಯ ಆಡಳಿತಕ್ಕೊಳಪಟ್ಟಿದೆ.



