HEALTH TIPS

ಹಿಜಾಬ್ ಧರಿಸಲು ಅನುಮತಿ: ವಿದ್ಯಾರ್ಥಿನಿ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಪ್ರಯಾಗ್‌ರಾಜ್: ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರ ನಿಯಮವನ್ನು ತಮ್ಮ ವೈಯಕ್ತಿಕ ಆದ್ಯತೆಗಳಿಗೆ ಅನುಗುಣವಾಗಿ ಬದಲಾಯಿಸುವ ಹಕ್ಕು ಯಾವುದೇ ವಿದ್ಯಾರ್ಥಿಗೂ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹಿಜಾಬ್ ಧರಿಸಲು ಅನುಮತಿ: ವಿದ್ಯಾರ್ಥಿನಿ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಪ್ರಯಾಗ್‌ರಾಜ್‌ನ ಖಾಸಗಿ ಶಾಲೆಯ ವಿದ್ಯಾರ್ಥಿನಿ ಈ ಅರ್ಜಿ ಸಲ್ಲಿಸಿದ್ದರು. ಪ್ರೌಢ ಶಿಕ್ಷಣ ಪೂರ್ಣಗೊಳಿಸಿರುವ ವಿದ್ಯಾರ್ಥಿನಿ, ಅದೇ ಸಂಸ್ಥೆಯಲ್ಲಿ 11ನೇ ತರಗತಿಗೆ ಪ್ರವೇಶ ಬಯಸಿದ್ದರು.

ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ಕೋರಿ ಬಾಲಕಿ ತನ್ನ ತಾಯಿಯ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಾಗಿದ್ದು, ತಾವು 6ನೇ ತರಗತಿಯಿಂದಲೂ ಅದೇ ಶಾಲೆಯಲ್ಲಿ ಹಿಜಾಬ್ ಧರಿಸುತ್ತಿರುವುದಾಗಿ ಅರ್ಜಿಯಲ್ಲಿ ವಾದಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಜೆ.ಜೆ.ಮುನೀರ್‌ ಮತ್ತು ನ್ಯಾ.ಇಂದ್ರಜಿತ್ ಶುಕ್ಲಾ ಅವರಿದ್ದ ಪೀಠ 'ನಾವು ಅರ್ಜಿದಾರರಿಗೆ ಸಂಬಂಧಿಸಿದ ವಿವಿಧ ತರಗತಿಗಳ ಚಿತ್ರಗಳನ್ನು ಪರಿಶೀಲಿಸಿದ್ದೇವೆ. ಅರ್ಜಿದಾರರನ್ನು ಹೊರತುಪಡಿಸಿ, ಅದೇ ಧರ್ಮಕ್ಕೆ ಸೇರಿದ ಇತರ ಯಾವ ವಿದ್ಯಾರ್ಥಿನಿಯೂ ಹಿಜಾಬ್‌ ಧರಿಸಿಲ್ಲ' ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ಎಂಬ ವಾದವನ್ನೂ ನ್ಯಾಯಾಲಯ ತಳ್ಳಿಹಾಕಿದೆ. ಹಿಜಾಬ್ ಧರಿಸಲು ಅನುಮತಿ: ವಿದ್ಯಾರ್ಥಿನಿ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries