HEALTH TIPS

'ಚಿಗುರಿದ ಕನಸು'- ಕವನ ಸಂಕಲನ ಬಿಡುಗಡೆ, ಚುಟುಕು ವಾಚನ ಗೋಷ್ಠಿ,

ಕಾಸರಗೋಡು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಕೃತಿ ಬಿಡುಗಡೆ ಸಮಾರಂಭ ಆ. 23ರಂದು ಮಧ್ಯಾಹ್ನ 3.30ಕ್ಕೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರುಗಲಿದೆ. ಸಮಾರಂಭದಲ್ಲಿ ಕುಮಾರಿ ಸಮೃದ್ಧಿ ಆಳ್ವ ಅವರ ಚೊಚ್ಚಲ ಕವನ ಸಂಕಲನ 'ಚಿಗುರಿದ ಕನಸು'ಪುಸ್ತಕ ಬಿಡುಗಡೆಮಾಡಲಾಗುವುದು.


ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು  ಅಧ್ಯಕ್ಷತೆ ವಹಿಸುವರು.   ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಕೃತಿ ಬಿಡುಗಡೆಗೊಳಿಸುವರು.  ಕವಿ ಪತ್ರಕರ್ತ ರಾಧಾಕೃಷ್ಣ ಕೆ ಉಳಿಯತ್ತಡ್ಕ, ಪೆರ್ಲದ ಸವಿಹೃದಯದ ಕವಿಮಿತ್ರರು ವೇದಿಕೆ ಸಂಚಾಲಕ ಸುಭಾಷ್ ಪೆರ್ಲ ಮತ್ತು ಚುಸಾಪ ಮಂಗಳೂರು ತಾಲೂಕು ಘಟಕ ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ  ಮುಖ್ಯ ಅತಿಥಿಗಳಾಗಿ ಪಾಳ್ಗೊಳ್ಳಲಿರುವರು. ಮಂಗಳೂರಿನ ಅನಾವರಣ ಸಾಮಾಜಿಕ, ಸಾಹಿತ್ಯ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಪರಿಮಳ ರಾವ್ ಕೃತಿ ಪರಿಚಯ ಮಾಡುವರು.

ಕಾರ್ಯಕ್ರಮದ ಅಂಗವಾಗಿ ಅಪರಾಹ್ನ ಗಂಟೆ 2.30 ರಿಂದ 3.30 ರ ತನಕ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಅಂತರ ಜಿಲ್ಲಾ ಮಟ್ಟದ ಚುಟುಕು ವಾಚನ ಗೋಷ್ಠಿ, ಮಕ್ಕಳ ಕವನ ವಾಚನ ಗೋಷ್ಠಿ, ಬಹುಭಾಷಾ ಕವಿಗೋಷ್ಠಿ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries