HEALTH TIPS

ಬ್ರಿಕ್ಸ್ ಶೃಂಗಸಭೆ: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಏಳು ವರ್ಷಗಳ ಬಳಿಕ ಭಾರತಕ್ಕೆ?

 ಬ್ರಿಕ್ಸ್ ಶೃಂಗಸಭೆ: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಏಳು ವರ್ಷಗಳ ಬಳಿಕ ಭಾರತಕ್ಕೆ?ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ದೊಡ್ಡ ನಿಯೋಗದೊಂದಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 

ಷಿ ಬರುವುದು ಖಚಿತವಾದರೆ, ಇದು ಏಳು ವರ್ಷಗಳ ನಂತರ ಭಾರತಕ್ಕೆ ಅವರ ಮೊದಲ ಭೇಟಿ ಆಗಲಿದೆ. ಹಾಗೆಯೇ, ಉಭಯ ದೇಶಗಳ ನಡುವಣ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಮಹತ್ವದ್ದೂ ಆಗಲಿದೆ.

ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್‌ 12 - 13ರಂದು ಬ್ರಿಕ್ಸ್‌ ಶೃಂಗಸಭೆ ನಡೆಯಲಿದೆ. 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ನಡುವೆ ಏರ್ಪಟ್ಟಿದ್ದ ಸಂಘರ್ಷದ ನಂತರ ದ್ವಿಪಕ್ಷೀಯ ಸಂಬಂಧ ಸ್ಥಿರಗೊಳಿಸುವ ಪ್ರಯತ್ನಗಳು ಪ್ರಗತಿಯಲ್ಲಿವೆ. ಈ ಕಾರಣಕ್ಕಾಗಿ ಷಿ ಭೇಟಿ ವಿಚಾರವು, ಶೃಂಗಸಭೆಯ ಇತರ ಕಾರ್ಯಸೂಚಿಗಳಿಗಿಂತಲೂ ಹೆಚ್ಚಾಗಿ ಗಮನ ಸೆಳೆದಿದೆ.

'ಚೀನಾ ಅಧಿಕಾರಿಗಳು ಹೋಟೆಲ್ ಮತ್ತು ಭದ್ರತಾ ವ್ಯವಸ್ಥೆಗಳ ಅಂತಿಮ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ' ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಮೂಲವೊಂದು 'ರಾಯಿಟರ್ಸ್‌'ಗೆ ಖಚಿತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷವಷ್ಟೇ ಚೀನಾಗೆ ಭೇಟಿ ನೀಡಿದ್ದರು. ಇದು, ಆ ದೇಶಕ್ಕೆ ಕಳೆದ ಏಳು ವರ್ಷಗಳಲ್ಲಿ ಕೈಗೊಂಡ ಮೊದಲ ಪ್ರವಾಸವಾಗಿತ್ತು.

ಷಿ ಅವರೊಂದಿಗೆ 400 ಅಧಿಕಾರಿಗಳ ನಿಯೋಗ ಭಾರತಕ್ಕೆ ಬರಲಿದೆ ಎಂದು ಮತ್ತೆರಡು ಮೂಲಗಳು ಹೇಳಿವೆ. ಅವರು 2019ರಲ್ಲಿ ಭಾರತಕ್ಕೆ ಬಂದಿದ್ದಾಗ 200ಕ್ಕಿಂತ ಕಡಿಮೆ ಅಧಿಕಾರಿಗಳು ನಿಯೋಗದಲ್ಲಿದ್ದರು.

ಬ್ರಿಕ್ಸ್‌ ಸಹಕಾರಕ್ಕೆ ಆದ್ಯತೆ ನೀಡುವ ಚೀನಾ, ಅದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಸದ್ಯ ಬ್ರಿಕ್ಸ್‌ ಅಧ್ಯಕ್ಷ ಸ್ಥಾನದಲ್ಲಿರುವ ಭಾರತವು ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಲು ಚೀನಾ ಬೆಂಬಲ ಸೂಚಿಸುತ್ತದೆ' ಎಂದು ತಿಳಿಸಿರುವ ಚೀನಾ ವಿದೇಶಾಂಗ ಸಚಿವಾಲಯ, 'ಷಿ ಪ್ರವಾಸ ಯೋಜನೆ ಸದ್ಯಕ್ಕೆ ಅಂತಿಮಗೊಂಡಿಲ್ಲ' ಎಂದೂ ಹೇಳಿದೆ.

ಷಿ ಅವರು ಕಳೆದ ವರ್ಷ (2025ರಲ್ಲಿ) ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಗೆ ಗೈರಾಗಿದ್ದರು.

ಬ್ರಿಕ್ಸ್ ಶೃಂಗಸಭೆ: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಏಳು ವರ್ಷಗಳ ಬಳಿಕ ಭಾರತಕ್ಕೆ?







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries