HEALTH TIPS

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ:ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್

ನವದೆಹಲಿ: 'ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಿಲ್ಲ' ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಹೇಳಿದ್ದಾರೆ.


ಅಮರ್ ಉಜಾಲಾ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಮೋದಿ ಸರ್ಕಾರದಲ್ಲಿ ರಸ್ತೆ ಸಾರಿಗೆ ಬಜೆಟ್ ನಿರಂತರವಾಗಿ ಹೆಚ್ಚುತ್ತಲ್ಲೇ ಇದೆ.

ಖಾಸಗಿ ಕೈಗಾರಿಕೀಕರಣ ಅವರ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಹೆಚ್ಚಿನ ಹಣವನ್ನು ಅದಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಆದರೆ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡುತ್ತಿಲ್ಲ. ಶಿಕ್ಷಣ ವಾಣಿಜ್ಯೀಕರಣಗೊಳಿಸುವುದನ್ನು ವಿರೋಧಿಸುತ್ತೇನೆ' ಎಂದಿದ್ದಾರೆ.

'ವಾಜಪೇಯಿ ಅವರ ಅಧಿಕಾರಾವಧಿಯಲ್ಲಿ ಹೊಸ ಶಿಕ್ಷಣ ನೀತಿಗೆ ಬೇಡಿಕೆ ಇದ್ದರೂ ಕೂಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಬದಲಾವಣೆ ಮಾಡಿರಲಿಲ್ಲ' ಎಂದು ಹೇಳಿದ್ದಾರೆ.

ಶಿಕ್ಷಣವು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕೆ ಹೊರತು ಲಂಚಕ್ಕೆ ಪ್ರೇರೇಪಿಸಬಾರದು' ಎಂದಿದ್ದಾರೆ.

ಶಿಕ್ಷಣ ಬಜೆಟ್‌ನಲ್ಲಿನ ಕಡಿತ, ಸರ್ಕಾರಿ ಶಾಲೆಗಳ ಮುಚ್ಚುವಿಕೆ, ಹೆಚ್ಚುತ್ತಿರುವ ಶಿಕ್ಷಣದ ಖಾಸಗೀಕರಣ, ಪತ್ರಿಕೆ ಸೋರಿಕೆ, ವ್ಯಾಪಕ ಭ್ರಷ್ಟಾಚಾರ ಸೇರಿ ಹಲವು ವಿಷಯಗಳ ಬಗ್ಗೆ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಮುರಳಿ ಮನೋಹರ್ ಜೋಶಿ ಅವರು ವಾಜಪೇಯಿ ಆಡಳಿತಾವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries