ಕಾಸರಗೋಡು: ಚೆಮ್ನಾಡ್ ಚೆಮ್ನಾಡ್ ಜಮಾ-ಅತ್ ಹೈಯರ್ ಸೆಕೆಂಡರಿ ಶಾಲೆಯ ಪ್ರೌಢಶಾಲಾ ನೂತನ ಕಟ್ಟಡದ ಉದ್ಘಾಟನೆ ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಶಾಲಾ ಆವರಣದಲ್ಲಿ ನಡೆಯಲಿದೆ.
ಸಾರ್ವಜನಿಕ ಶಿಕ್ಷಣ ಸಚಿವ ಅಡ್ವೊಕೇಟ್ ಎನ್. ಶಮ್ಸುದ್ದೀನ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸುವರು.
ಇದೇ ಸಂದರ್ಭ ಚೆಮ್ನಾಡ್ ಜಮಾತ್ ಹೈಯರ್ ಸೆಕೆಂಡರಿ ಶಾಲೆ ಮತ್ತು ಚೆಮ್ನಾಡ್ ಜಮಾತ್ ಇಂಗ್ಲಿಷ್ ಮೀಡಿಯಂ ಶಾಲೆಯಿಂದ ನಿವೃತ್ತರಾಗುತ್ತಿರುವ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯುವುದು. ಎಸ್ಸೆಸೆಲ್ಸಿ ಮತ್ತು ಪ್ಲಸ್ ಟು ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹಾಗೂ ಕಳೆದ ಶೈಕ್ಷಣಿಕ ವರ್ಷದಲ್ಲಿ ಎನ್‍ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಚೆಮ್ಮನಾಡ್ ಜಮಾಅತ್ ಸಮಿತಿಯ ಅಧ್ಯಕ್ಷ ಸಿ.ಟಿ. ಅಹ್ಮದ್ ಅಲಿ ಸಮಾರಂಭದ ಅಧ್ಯಕ್ಷತೆ ವಹಿಸುವರು.

