ಸಮರಸ ಚಿತ್ರಸುದ್ದಿ: ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕಾಸರಗೋಡಿನ ಹೊಸ ಬಸ್ ನಿಲ್ದಾಣದ ವಠಾರದಲ್ಲಿ 'ವಂದೇ ಮಾತರಂ' ಆಲಾಪನಾ ಕಾರ್ಯಕ್ರಮ ಆಯೋಜಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಂಜಿತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಎನ್. ಬಾಬುರಾಜ್, ಮನುಲಾಲ್ ಮೇಲತ್ ಮತ್ತು ಪಿ.ಆರ್. ಸುನಿಲ್ ಮೊದಲಾದವರು ಉಪಸ್ಥಿತರಿದ್ದರು.


