ಮುಳ್ಳೇರಿಯ: ಅಡೂರು ದೇಲಂಪಾಡಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ದೇಲಂಪಾಡಿ ನಿವಾಸಿ, ಸಜಿತ್ ಎಂಬವರ ಪತ್ನಿ ಸುಶೀಲ (44) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಸುಶೀಲ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಸುಶೀಲಾ ಅವರುಮನೆಯಿಂದ ನಾಪತ್ತೆಯಾದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸುವ ಮಧ್ಯೆ ನೆರೆಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

