ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಶ್ರೀಕ್ಷೇತ್ರದ ಸಭಾಂಗಣದಲ್ಲಿ ಹನುಮಗಿರಿ ಶ್ರೀ ಕೋದಂಡರಾಮ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ ವತಿಯಿಂದ ನಡೆಯುತ್ತಿರುವ ಯಕ್ಷಗಾನ ಬಯಲಾಟದ ಸಮಾರೋಪ ಸಮಾರಂಭ ಆ. 9ರಂದು ಸಂಜೆ 6ಕ್ಕೆ ನಡೆಯಲಿದೆ.
ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ರಾಘವೇಂದ್ರ ಭಟ್ ಸಮಾರಂಭ ಉದ್ಘಾಟಿಸುರು. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಮಾನವಹಕ್ಕುಗಳ ಆಯೋಗ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಗೌರವ ಉಪಸ್ಥಿತರಿರುವರು.
ಈ ಸಂದರ್ಭ ಕೇಂದ್ರ ಸಂಗೀತ-ನೃತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಕೆರೆಮನೆ ಶಿವಾನಂದ ಹೆಗಡೆ ಅವರನ್ನುಅಭಿನಂದಿಸಲಾಗುವುದು.
ಸಮಾರೋಪದ ಅಂಗವಾಗಿ ಇಂದು ಮಧ್ಯಾಹ್ನ 2.30 ರಿಂದ ಶಶಿವಂಶ ವಲ್ಲರಿ-ಅಗ್ರಪೂಜೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.


