ಟೆಹರಾನ್: ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಿಲ್ಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ CNN-News18 ವರದಿ ಮಾಡಿದೆ.
18ನೇ ಬ್ರಿಕ್ಸ್ ಶೃಂಗಸಭೆಯು ಸೆಪ್ಟೆಂಬರ್ 12-13ರಂದು ನಡೆಯಲಿದೆ. ಈ ಭೇಟಿಯು ಭಾರತ ಮತ್ತು ಇರಾನ್ ನಡುವಿನ ಸಂಬಂಧಗಳನ್ನು ಬಲಪಡಿಸಲು ಅಧ್ಯಕ್ಷ ಪೆಜೆಶ್ಕಿಯನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ದ್ವಿಪಕ್ಷೀಯ ಮಾತುಕತೆಗೆ ಹಾದಿ ಮಾಡಿಕೊಡಲಿದೆ.
ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು, ಆರ್ಥಿಕ ಸಹಕಾರ ಹಾಗೂ ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಯಿದೆ. ಅಮೆರಿಕ-ಇರಾನ್ ಸಂಘರ್ಷದ ನಡುವೆ ಪೆಜೆಶ್ಕಿಯನ್ ಅವರ ಈ ದಿಲ್ಲಿ ಭೇಟಿಯು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

