HEALTH TIPS

ಅನುಮತಿ ಪಡೆಯದೆ ಶಾಲೆ ಪ್ರವೇಶಿಸಿ ಶಿಕ್ಷಕರಿಗೆ ಬೆದರಿಕೆ: ದೀಪ್ಕೆ ವಿರುದ್ಧ FIR

ಲಾತೂರ್: ಅನುಮತಿ ಪಡೆಯದೆ ಸರ್ಕಾರಿ ಶಾಲೆಯೊಳಗೆ ಪ್ರವೇಶಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಚಾಲಕ ಅಭಿಜಿತ್ ದೀಪ್ಕೆ ಮತ್ತು ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸೈಯದ್ ಶಂಶಾದ್‌ಬಾನೋ ಖೈರತಾಲಿ ಅವರು ನೀಡಿದ ದೂರು ಆಧರಿಸಿ ಔಸಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

'ಶಾಲೆಗಳನ್ನು ಸರಿಪಡಿಸಿ' ಅಭಿಯಾನದ ಭಾಗವಾಗಿ ದೀಪ್ಕೆ ಅವರು ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡುತ್ತಿದ್ದು, ಅಲ್ಲಿನ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದ್ದಾರೆ.

'ದೀಪ್ಕೆ ಮತ್ತು ಅವರ ಸಹಚರರು ಅನುಮತಿ ಪಡೆಯದೆ ಶಾಲೆಯೊಳಗೆ ಪ್ರವೇಶಿಸಿದ್ದು, ವಿದ್ಯಾರ್ಥಿಗಳ ನಡುವೆ ಕುಳಿತು ಅವರಿಗೆ ವಿವಿಧ ಪ್ರಶ್ನೆಗಳನ್ನು ಕೇಳುವ ಮೂಲಕ ಶಿಕ್ಷಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೇ ಅಲ್ಲದೆ, ತಮ್ಮ ಭೇಟಿಯ ಸಂದರ್ಭದಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಬೇರೆ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ತರಗತಿಗಳಲ್ಲಿ ಕೂರಿಸಲಾಗಿತ್ತು ಎಂದು ಹೇಳುವ ಮೂಲಕ ದೀಪ್ಕೆ ಶಾಲೆಯ ತೇಜೋವಧೆ ಮಾಡಿದ್ದಾರೆ. ಹಾಗೆಯೇ ಶಿಕ್ಷಕರನ್ನು ಅಮಾನತುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೀಪ್ಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries