ರಾಯಪುರ: ಛತ್ತೀಸಗಢ ಸಾರ್ವಜನಿಕ ಸೇವಾ ಆಯೋಗದ (ಸಿಜಿಪಿಎಸ್‌ಸಿ) ನೇಮಕಾತಿಯ ಹಗರಣದಲ್ಲಿ ಸಿಬಿಐ ಬಂಧಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಜೀವನ್ ಕಿಶೋರ್ ಧ್ರುವ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.
ಇಂತಹ ಕೃತ್ಯಗಳು ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತದೆ' ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2020-2022ರ ಸಿಜಿಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ವೇಳೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಜೀವನ್ ಕಿಶೋರ್ ಧ್ರುವ್ ಅವರು ಮುಖ್ಯಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ತಮ್ಮ ಮಗ ಸುಮಿತ್‌ಗೆ ನೀಡುತ್ತಿದ್ದರು ಎಂದು ವರದಿಯಾಗಿದೆ.
ಬಳಿಕ ಸಿಜಿಪಿಎಸ್‌ಸಿ ನೇಮಕಾತಿಯಲ್ಲಿ ಸುಮಿತ್ ಅವರು ಉಪ ಜಿಲ್ಲಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜೀವನ್ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.
ಈ ಪ್ರಕರಣ ಸಂಬಂಧ ನ್ಯಾಯಮೂರ್ತಿ ಬಿಭು ದತ್ತ ಗುರು ಅವರು ಜುಲೈ 31ರಂದು ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದರು. ಬುಧವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

