HEALTH TIPS

Jammu & Kashmir | ಕುಲ್ಗಾಮ್ ನಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ವಲಸೆ ಕಾರ್ಮಿಕ ಮೃತ್ಯು, ಮತ್ತೊಬ್ಬರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕೆಲ್ಲಾಮ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. 


ಕೆಲ್ಲಾಮ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ತಕ್ಷಣ ಇಬ್ಬರನ್ನೂ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.

ಗಾಯಗೊಂಡಿದ್ದ ಕಾರ್ಮಿಕರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಅನಂತ್ನಾಗ್ನ ಸರ್ಕಾರಿ ವೈದ್ಯಕೀಯ ಕಾಲೇಜು (ಉಒಅ) ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ದಾಳಿಯ ಬಳಿಕ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ, ಪ್ರದೇಶವನ್ನು ಸುತ್ತುವರೆದು ದಾಳಿಕೋರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿವೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries