HEALTH TIPS

TMC ಪಕ್ಷಕ್ಕೆ ರಾಜೀನಾಮೆ ನೀಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಕುಮಾರ್ ಬೋಸ್ ಅವರು ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ತೊರೆದು ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಚಂದ್ರಕುಮಾರ್ ಬೋಸ್ ವೈಯಕ್ತಿಕ ಕಾರಣವನ್ನು ಉಲ್ಲೇಖಿಸಿ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ತೊರೆದ ನಂತರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ವೇಳೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರಿದ್ದ ಬೋಸ್ ಅವರ ರಾಜೀನಾಮೆ ಮತ್ತೊಂದು ರಾಜಕೀಯ ಬದಲಾವಣೆಯನ್ನು ಸೂಚಿಸುತ್ತದೆ.

ಚಂದ್ರಕುಮಾರ್ ಬೋಸ್ ಅವರ ರಾಜೀನಾಮೆ ಕುರಿತು ಟಿಎಂಸಿ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

"ವೈಯಕ್ತಿಕ ಕಾರಣಗಳಿಂದಾಗಿ ನಾನು ತೃಣಮೂಲ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಚಂದ್ರಕುಮಾರ್ ಬೋಸ್ ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries