ಅಬುಧಾಬಿ: ಸರಕಾರಿ ಸ್ವಾಮ್ಯದ ಅಬುಧಾಬಿ ನ್ಯಾಷನಲ್ ಆಯಿಲ್ ಕಂಪೆನಿಗೆ (ಎಡಿಎನ್‌ಒಸಿ) ಸೇರಿದ ಎರಡು ಹಡಗುಗಳು ಗುರುವಾರ ಸಂಜೆ ಹಾರ್ಮುಝ್ ಜಲಸಂಧಿಯ ಮೂಲಕ ಹಾದುಹೋಗುತ್ತಿದ್ದಾಗ ಅವುಗಳ ಮೇಲೆ ದಾಳಿ ನಡೆದಿದೆ ಎಂದು UAEಯ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ದಾಳಿಗೆ UAE ಸರಕಾರವು ಇರಾನ್ ಅನ್ನು ಹೊಣೆಗಾರನನ್ನಾಗಿ ಮಾಡಿದೆ.
ಹಾರ್ಮುಝ್ ಜಲಸಂಧಿಯ ಮೂಲಕ ಸಂಚರಿಸುತ್ತಿದ್ದ ಎಡಿಎನ್‌ಒಸಿಗೆ ಸೇರಿದ ಎರಡು ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ಶತ್ರುತ್ವದ ದಾಳಿಯನ್ನು ಖಂಡಿಸುತ್ತೇವೆ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ ಎಂದು UAE ವಿದೇಶಾಂಗ ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

