ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ವರ್ ಯಾತ್ರೆಗೆ ಬಂದಿದ್ದ ಗುಂಪೊಂದು ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ.
ಕಲ್ಲು ತೂರಾಟದಿಂದ ಶಾಲಾ ವ್ಯಾನ್ ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ವ್ಯಾನ್ ನಲ್ಲಿದ್ದ ಹೆಚ್ಚಿನ ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದ ಕಾರಣ ದಾಳಿ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದು thehindu.com ವರದಿ ಮಾಡಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚೌಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರ ಪುರಾವೆಗಳ ಆಧಾರದ ಮೇಲೆ ಕಲ್ಲು ತೂರಾಟದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
In UP's Lucknow, a school van was attacked and vandalised allegedly by men part of Kanwar Yatra in Lucknow.

